ನ್ಯೂಸ್ ನಾಟೌಟ್ : ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಬೆಂಗಳೂರು ಮೂಲದ ಈರಯ್ಯ ದೂಂತೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸುಳ್ಯ ಎಸ್ಐ ಆಗಿರುವ ದಿಲೀಪ್ ಜಿ.ಆರ್ ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಅವರು ವರ್ಗಾವಣೆಯಾಗಿದ್ದಾರೆ. 2014ನೇ ಬ್ಯಾಚ್ನ ಅಧಿಕಾರಿಯಾದ ಈರಯ್ಯ ದೂಂತೂರು ಅವರು ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್ಐ ಆಗಿದ್ದರು.ಉಪ್ಪಿನಂಗಡಿ, ಶಿರಸಿಯಲ್ಲಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಈಗ ಕುಂದಾಪುರದಲ್ಲಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ತಿಳಿದು ಬಂದಿದೆ.