ನ್ಯೂಸ್ ನಾಟೌಟ್: ಬುಧವಾರ ತಡರಾತ್ರಿ ಹಿರಿಯ ಬಿಜೆಪಿ ನಾಯಕರು ಮೋದಿ ನಿವಾಸದಲ್ಲಿ ಸಭೆ ಸೇರಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರು ಅಮೆರಿಕ- ಈಜಿಪ್ಟ್ ಪ್ರವಾಸದಿಂದ ಮರಳಿದ ಕೆಲವೇ ದಿನಗಳಲ್ಲಿ ಈ ಸಭೆ ನಡೆದಿದೆ. ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡುವ ಸುಳಿವು ನೀಡಿದ್ದರು. ದೇಶವು ಎರಡು ಕಾನೂನುಗಳ ಅಡಿಯಲ್ಲಿ ನಡೆಸಲು ಸಾಧ್ಯವಿಲ್ಲ ಎಂದಿದ್ದರು ತಿಳಿಸಿದ್ದಾರೆ ಎನ್ನಲಾಗಿದೆ.
ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.