ನ್ಯೂಸ್ ನಾಟೌಟ್: ರೈತರು ತಾವು ಬೆಳೆದ ಬೆಳೆಗೆ ಬೆಲೆಯಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಸುದ್ದಿಗಳನ್ನು ಓದಿದ್ದೇವೆ. ಆದರೆ ಇಲ್ಲೊಬ್ಬ ರೈತ ಮದುವೆಯಾಗುವುದಕ್ಕೆ ಹೆಣ್ಣು ಸಿಕ್ಕಿಲ್ಲ ಎಂಬ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ 36 ವರ್ಷದ ಮಂಜುನಾಥ ನಾಗನೂರು ಎಂಬ ರೈತ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಕಳೆದ 7-8 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದರು. ಆದರೆ ಮಂಜುನಾಥಗೆ ಯಾರೊಬ್ಬರೂ ಹುಡುಗಿ ನೀಡಲು ಒಪ್ಪುತ್ತಿರಲಿಲ್ಲ. ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ, ಅಂತ ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.