ನ್ಯೂಸ್ ನಾಟೌಟ್ : ತಂಗಿಗೆ ರಕ್ಷಣೆಯಾಗಿ ನಿಲ್ಲಬೇಕಾಗಿದ್ದ ಸಹೋದರರೇ ಅತ್ಯಾಚಾರವೆಸಗಿದ್ದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ. 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿರುವ ಸ್ಪೋಟಕ ವಿಷಯವೊಂದನ್ನು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ದೆಹಲಿಯಲ್ಲಿ ಓದುತ್ತಿದ್ದು, ಗ್ವಾಲಿಯರ್ನಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ಬಂದಿದ್ದಳು ಎಂದು ಪೊಲೀಸ್ ಉಪ ಅಧೀಕ್ಷಕ ವಿಜಯ್ ಸಿಂಗ್ ಭಡೋರಿಯಾ ತಿಳಿಸಿದ್ದಾರೆ.ಹನುಮಾನ್ ಶಂಕರ್ ಕಾಲೋನಿಯಲ್ಲಿರುವ ಆರೋಪಿಗಳ ನಿವಾಸದೆದುರು ಹಾದುಹೋಗುತ್ತಿದ್ದಾಗ ಸಂತ್ರಸ್ತೆಯನ್ನು ಮನೆಯ ಒಳಗೆ ಎಳೆದುಕೊಂಡಿದ್ದಾರೆ. ಬಳಿಕ ಇಬ್ಬರು ಸಹೋದರರು ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದರು.ಮೊರಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದು,ಇಬ್ಬರು ಆರೋಪಿಗಳ ವಿರುದ್ಧ ಸೂಕ್ತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.