ನ್ಯೂಸ್ ನಾಟೌಟ್: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುಳ್ಯದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಬುಧವಾರ (ಜೂನ್ 21 ) ಯೋಗ ದಿನ ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಮೋಹನ್ ಬಾಬು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶೆ ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಆರ್ಯುಧಾಮ ಆರ್ಯುವೇದ ಆಸ್ಪತ್ರೆಯ ಯೋಗ ಶಿಕ್ಷಕಿ ಡಾ. ಸಾತ್ವಿಕಾ, ನ್ಯಾಯವಾದಿಗಳು, ಕೋರ್ಟ್ ಸಿಬ್ಬಂದಿ, ಪೊಲೀಸರು ಉಪಸ್ಥಿತರಿದ್ದರು.