ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು 8 ಕುಟುಂಬಗಳ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.ಕಡಬ ತಹಶೀಲ್ದಾರ್ ಸೂಚನೆ ಮೇರೆಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಆದಿ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ನೂಚಿಲ ಮೂಲ ಗುಡ್ಡದ ಬುಡದಲ್ಲೇ ಮಣ್ಣು ಸಮತಟ್ಟು ಮಾಡಿ ನಿರ್ಮಿಸಲಾದ 8 ಮನೆಗಳ ಮೇಲೆ ಗುಡ್ಡ ಕುಸಿಯುವ ಭೀತಿ ನಿರ್ಮಾಣವಾಗಿದೆ.ಈ ಕುಟುಂಬಕ್ಕೆ ನೋಟಿಸ್ ಜಾರಿ ಮಾಡಿ ಕುಟುಂಬಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ ಗುಡ್ಡ ಕುಸಿದು ಬೀಳುವ ಅಪಾಯ ಹೆಚ್ಚಾಗಿದೆ.
ಜು.18ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಸಂತ್ರಸ್ತರನ್ನು ಕಳುಹಿಸಲಾಗಿದೆ.ಮಳೆಗಾಲ ಮುಗಿಯುವವರೆಗೆ ಈ ಮನೆಗಳನ್ನು ಬಳಸದಂತೆಯೂ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.