ನ್ಯೂಸ್ ನಾಟೌಟ್ : ಉಯ್ಯಾಲೆ ಆಡುತ್ತಿದ್ದಾಗ 8ನೇ ತರಗತಿಯ ಬಾಲಕನೋರ್ವ ಕುತ್ತಿಗೆಗೆ ಹಗ್ಗ ಬಿಗಿದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಶ್ರೀಷಾ(14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಇದ್ದ ಕಾರಣ ಬಾಲಕ ಮನೆಯಲ್ಲಿ ಸೀರೆಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ. ಈ ಸಂದರ್ಭ ಕುತ್ತಿಗೆಗೆ ಹಗ್ಗ ಬಿಗಿದು ಕೆಳಗೆ ಬಿದ್ದಿದ್ದ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.