ನ್ಯೂಸ್ ನಾಟೌಟ್: ಇಂಜಿನೀಯರ್ ಕಾಲೇಜು ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಸ್ಥಳದಲ್ಲಿಯೇ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಡಿವೈಡರ್ಗೆ ಗುದ್ದಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
11.40ರ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಅತೀ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.