ನ್ಯೂಸ್ ನಾಟೌಟ್: ಜಾಗದ ವಿಷಯದಲ್ಲಿ ಸಹೋದರನಿಗೆ ಚಾಕು ಇರಿದು ಪರಾರಿಯಾಗಿದ್ದ ಸಹೋದರರು ಇದೀಗ ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ತಿಳಿದು ಬಂದಿದೆ. ನ್ಯೂಸ್ ನಾಟೌಟ್ ಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿ ಕರೆದುಕೊಂಡು ಬರುತ್ತಿದ್ದಾರೆ ಎಂದು ಕೊಡಗು ಪೊಲೀಸ್ ಮೂಲಗಳು ತಿಳಿಸಿವೆ.
ಶುಕ್ರವಾರ ಜು.14 ರಂದು ಬೆಳಗ್ಗೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಜಾಗದ ವಿವಾದದ ಹಿನ್ನೆಲೆಯಲ್ಲಿ ಉಸ್ಮಾನ್ ಅನ್ನುವ ವ್ಯಕ್ತಿಯನ್ನು ಚೂರಿಯಿಂದ ಬರ್ಬರವಾಗಿ ಇರಿದು ಕೊಲೆ ಮಾಡಲಾಗಿತ್ತು. ಸ್ವಂತ ಸಹೋದರರೇ ಈ ಕೃತ್ಯವನ್ನು ಎಸಗಿ ಪರಾರಿಯಾಗಿದ್ದರು. ಇದೀಗ ಆರೋಪಿಗಳಾದ ಸತ್ತಾರ್, ರಫೀಕ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಆಟೋ ಚಾಲಕನನ್ನು ಕೂಡ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಕೇರಳಕ್ಕೆ ಆರೋಪಿಗಳು ಪರಾರಿಯಾಗಿರುವ ಮಾಹಿತಿ ಪಡೆದ ಪೊಲೀಸರು ಎರ್ನಾಕುಳಂ ಎಂಬಲ್ಲಿ ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ಸೈಬರ್ ಪೊಲೀಸರ ಸಹಾಯ ಪಡೆದು ಬಂಧಿಸಲಾಗಿದೆ ಎನ್ನಲಾಗಿದೆ.