ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಸಿಕ್ಕಿರುವ ನಕಲಿ ದಾಖಲೆ, ಸೀಲುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಕಬಕ ಗ್ರಾಮದ ಕೊಡಿಪ್ಪಾಡಿ ನಿವಾಸಿ ವಿಶ್ವನಾಥ (35) ಎಂದು ಗುರುತಿಸಲಾಗಿದೆ. ಈಗ ನಕಲಿ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ ಎಂದು ತಿಳಿದು ಬಂದಿದೆ.
ಈತ ಪುತ್ತೂರು ನಗರಸಭೆ, ಸುಳ್ಯ, ಬಂಟ್ವಾಳ, ಕಡಬ ತಾಲೂಕಿನ ವಿವಿಧ ಗ್ರಾ.ಪಂ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ ಎಂದು ತಿಳಿದು ಬಂದಿದೆ.
ಈತನ ಬಗ್ಗೆ ಸಾರ್ವಜನಿಕರು ನೀಡಿದ ದೂರಿನಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಪ್ರಮುಖ ಅಧಿಕಾರಿಗಳ ಸಹಿಯನ್ನು ನಕಲಿ ಮಾಡಿ ದಾಖಲೆಯನ್ನು ಸಿದ್ಧಪಡಿಸುತ್ತಿದ್ದ ಎಂದು ತಿಳಿದು ಬಂದಿದೆ.
ಇದೀಗ ಬಂಧಿತನಿಂದ ನಿರಾಕ್ಷೇಪಣಾ ಪತ್ರ, ನಕಲಿ ತೆರಿಗೆ ರಶೀದಿ ಸೇರಿ 50ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರು ತಾಲೂಕು ಪಂಚಾಯತ್ ಸಿಇಓ ದೂರಿನಂತೆ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಈತ ಇಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಹೆಸರಿನ ಶಾಪ್ ನಲ್ಲಿ ಕಂಪ್ಯೂಟರ್, ಪ್ರಿಂಟರ್ ಇಟ್ಟು ನಕಲಿ ದಾಖಲೆಗಳನ್ನು ತಯಾರು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ. ಪ್ರಕರಣದಲ್ಲಿ ಪ್ರಭಾವಿಗಳು, ಅಧಿಕಾರಿಗಳ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ.