ನ್ಯೂಸ್ ನಾಟೌಟ್ : ಭಾರೀ ಮಳೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಈ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರ ಬಗ್ಗೆ ವರದಿಯಾಗಿದೆ.
ಹಲವೆಡೆ ಹಾನಿಯಾಗಿದ್ದು, ಇಲ್ಲೊಂದೆಡೆ ತಡೆಗೋಡೆ ನಿರ್ಮಾಣ ಮಾಡದೆ ರಸ್ತೆ ಅಗಲೀಕರಣ ಮಾಡಿರುವುದರಿಂದ ಮಣ್ಣು ಕುಸಿದು ಬಿದ್ದಿದೆ. ಪ್ರತಿನಿತ್ಯ ಶಿರಾಡಿಘಾಟ್ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿರುವುದರಿಂದ ಜನ ಆತಂಕದಲ್ಲೇ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಸವಾರರಿಗೆ ಈ ರೀತಿಯ ತೊಂದರೆಯಾಗಿದೆಯೆಂದು ಜನ ಆಕ್ರೋಶ ಹೊರಹಾಕುತ್ತಿದ್ದಾರೆ.