ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 14 ನೇ ಬಜೆಟ್ ಮಂಡಿಸಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಮದ್ಯಪ್ರಿಯರಿಗೆ ನಿರಾಸೆ ತಂದಿದೆ. ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ ಭಾರೀ ಹೆಚ್ಚಳ ಮಾಡಿರುವುದಾಗಿ ತಿಳಿಸಲಾಗಿದೆ.
ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದ್ದು, ಹಾಲಿ ದರದ ಮೇಲೆ ಶೇ 20 ರಷ್ಟು ಸುಂಕವನ್ನು ಹೆಚ್ಚಿಸಲಾಗಿದೆ. ಪ್ರಮುಖವಾಗಿ, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದ್ದು, ಶೇ. 175 ರಿಂದ 185ರಷ್ಟು ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಹೀಗೆ ಮಾಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.