ನ್ಯೂಸ್ ನಾಟೌಟ್ : ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಭಾನುವಾರ ಸಂಜೆ ಪ್ರಕಟಣೆ ಹೊರಡಿಸಿದ್ದಾರೆ.
ಸದ್ಯ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ.