ನ್ಯೂಸ್ ನಾಟೌಟ್ :ಒಳ ಉಡುಪಿನಲ್ಲಿ(underwear) ಚಿನ್ನವನ್ನು ಸಾಗಣೆ ಮಾಡುತ್ತಿದ್ದಾತನನ್ನು ಹಿಡಿದು ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ತೆಂಲಗಾಣದ ಹೈದ್ರಾಬಾದ್ನ (Hyderabad) ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ (Rajiv Gandhi international Airport) ನಡೆದಿದೆ.ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನಿಂದ 20 ಲಕ್ಷ ರೂ.ಗೂ ಅಧಿಕ ಮೌಲ್ಯದ 331 ಗ್ರಾಮ ಚಿನ್ನದ ಪೇಸ್ಟ್ ವಶಪಡಿಸಿಕೊಂಡಿದ್ದಾರೆ.
ಈ ಪ್ರಯಾಣಿಕ ಚಿನ್ನದ ಪೇಸ್ಟ್ ಅನ್ನು ತನ್ನ ಒಳಉಡುಪಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಎನ್ನಲಾಗಿದೆ. ಸಂದೇಹದ ಮೇರೆಗೆ ವಿಮಾನ ನಿಲ್ದಾಣದಲ್ಲಿ ಈ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ಗೊತ್ತಾಗಿದೆ. ಆತನಿಂದ 20 ಲಕ್ಷ ರೂ. ಮೌಲ್ಯದ ಚಿನ್ನದ ಪೇಸ್ಟ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.ಬಂಧಿತ ಪ್ರಯಾಣಿಕರ ಶಾರ್ಜಾದಿಂದ ಪ್ರಯಾಣಿಸುತ್ತಿದ್ದ ಎಂದು ತಿಳಿದು ಬಂದಿದೆ.