ನ್ಯೂಸ್ ನಾಟೌಟ್ ಮಂಗಳೂರು: ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ (ಜು. 13ರಂದು) ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಬರಮಾಡಿಕೊಂಡರು. ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.