ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಎಂದಿನಂತೆ ಬಸ್ಸು ಬಂದು ನಿಂತಿತು. ಇಬ್ಬರು ಪೊಲೀಸರು ಬಸ್ಸಿಗೆ ಹತ್ತಿದ್ದರು. ನಿಯಮ ಉಲ್ಲಂಘನೆ ನಡೆಸಿರುವ ಒಂದಷ್ಟು ಮಂದಿಯನ್ನು ಪೊಲೀಸರು ಸೀಟಿನಿಂದ ಏಬ್ಬಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರಿನಲ್ಲಿ ಸರಕಾರಿ ಬಸ್ಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಎಲ್ಲರೂ ಖಾಸಗಿ ಬಸ್ಗಳನ್ನೇ ಅವಲಂಭಿಸಿದ್ದಾರೆ. ಹೀಗೆ ಬಸ್ಗಳಲ್ಲಿ ಪ್ರಯಾಣ ಮಾಡುವಾಗ ಕೆಲವರು ಮಹಿಳೆಯರ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸೀಟಿನಲ್ಲಿ ಕುಳಿತು ಪ್ರಯಾಣ ಮಾಡುತ್ತಾರೆ. ಹಿರಿಯನಾಗರಿಕರು, ಮಹಿಳೆಯರು, ಅಂಗವಿಕಲರು ಬಂದರೂ ಅವರಿಗೆ ಸೀಟು ಬಿಟ್ಟುಕೊಡುವುದಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ದೂರನ್ನು ಪಡೆದು ಬಸ್ ನಿಲ್ಲಿಸಿ ಟ್ರಾಫಿಕ್ ಪೊಲೀಸ್ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿರಿಯ ನಾಗರಿಕರ, ಮಹಿಳೆಯರ ಸೀಟಿನಲ್ಲಿ ಕುಳಿತವರನ್ನು ಎಬ್ಬಿಸಿದ್ದಾರೆ. ನಿಂತುಕೊಂಡಿದ್ದ ಹಿರಿಯ ನಾಗರಿಕರು, ಮಹಿಳೆಯರನ್ನು ಕೂರಿಸಿದ್ದಾರೆ. ಇನ್ನು ಮುಂದೆ ಮೀಸಲಾಗಿರುವ ಆಸನಗಳಲ್ಲಿ ಬೇರೆಯವರಿಗೆ ಕುಳಿತುಕೊಳ್ಳಲು ಅವಕಾಶ ಇರುವುದಿಲ್ಲ, ಯಾರನ್ನೂ ಕೂರಲು ಬಿಡಬೇಡಿ ಎಂದು ಟ್ರಾಫಿಕ್ ಪೊಲೀಸ್ ಕಂಡಕ್ಟರ್ಗೆ ಸೂಚನೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ