ನ್ಯೂಸ್ ನಾಟೌಟ್ : ಮಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ಮಂಗಳೂರು ನಗರದಲ್ಲಿ ವೀಕ್ಷಣೆಗೆ ತೆರಳಿ, ಮಳೆಯಿಂದಾದ ಸಮಸ್ಯೆಗಳ ಬಗ್ಗೆ ವಿವರಣೆ ಪೆಡೆದರು.
ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಆದ ಅನಾಹುತಗಳನ್ನು ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.