ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ (Karnataka budget 2023) “ಉದ್ಯಮ ಶಕ್ತಿ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇದರ ನಿರ್ವಹಣೆ ಹೊಣೆಯನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳಿಗೆ ವಹಿಸಲಾಗಿದೆ.
ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ʻಉದ್ಯಮ ಶಕ್ತಿʼ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮ ವಹಿಸಲಿದೆ. ಪೆಟ್ರೋಲಿಯಂ ಕಂಪನಿಗಳು ಇದರ ನಿರ್ಮಾಣಕ್ಕೆ ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.