ನ್ಯೂಸ್ ನಾಟೌಟ್: ಮಳೆಗಾಲದ ಅಬ್ಬರ ಶುರುವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿವಿಧ ಪ್ರಾಕೃತಿಕ ಅನಾಹುತಗಳಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದೀಗ ನೆರೆಯ ಕೇರಳದ ಸಮೀಪವಿರುವ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿದಿದೆ. ಇದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇನ್ನೂ ಮಳೆ ಮುಂದುವರಿದರೆ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ.