ನ್ಯೂಸ್ ನಾಟೌಟ್: ಸಂಪಾಜೆ ವಲಯ ಕಾರ್ಯಕರ್ತರ ಸಭೆ ಇಂದು ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿಯ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಶಾಸಕ ಎ.ಎಸ್ ಪೊನ್ನ ಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಸಾವರ್ಜನಿಕರ ಪರ ತಿರುಮಲ ಸ್ವಾಮಿ ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಹೇಳಿ ಕೊಂಡರು.ನಂತರ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ನಾವು ಒಗ್ಗಟ್ಟಾಗಿ ಕೆಲಸ ಮಾಡಿದರೆ ನಿಶ್ಚಿತವಾಗಿ ಜಯ ಸಿಗಲಿದೆ. ಇದಕ್ಕೆ ಸಾಕ್ಷಿಯಾಗಿದೆ ಸಂಪಾಜೆ ಗ್ರಾಮ. ನಿಮ್ಮ ಅಮೂಲ್ಯ ಮತ ನನ್ನನ್ನು ಗೆಲ್ಲಿಸುವಂತೆ ಮಾಡಿದೆ. ನಿಮ್ಮ ಸಮಸ್ಯೆಗಳನ್ನು ಬಗೆ ಹರಿಸುತ್ತೇನೆ ಎಂದು ಹೇಳಿದರು.
ಕಿಂಡಿ ಅಣೆಕಟ್ಟು ಹಾಗೂ ಕಳಪೆ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸೋಣ ಎಂದ ಅವರು ಕಳಪೆ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸದವರ ಮೇಲೆ ಕ್ರಮ ಕೈಗೊಳ್ಳುತ್ತೇನೆ.ಭ್ರಷ್ಟಾಚಾರಕ್ಕೆ ಆಸ್ಪದ ಕೊಡದೇ ಅಭಿವೃದ್ಧಿ ಕಾರ್ಯದಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಕರೆ ನೀಡಿದರು.ಕೃಷಿ ಬೆಳೆಗಳಿಗೆ ಪ್ರಾಣಿಗಳ ಕಾಟ ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸುವಂತೆ ಜನರಿಗೆ ಮನ ಮುಟ್ಟುವಂತಹ ಇನ್ನೂ ಹೆಚ್ಚೆಚ್ಚು ಕಾರ್ಯಕ್ರಮಗಳು ನಡಿತಾನೇ ಇರಬೇಕು ಎಂದು ಹೇಳಿದರು. ಬಳಿಕ ಶಾಸಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್ , ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ವಕ್ತಾರ ಟಿ.ಪಿ. ರಮೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೊಳ್ಯದ ಗಿರೀಶ್, ಮಾಜಿ ಅಧ್ಯಕ್ಷ ಯುವ ಕಾಂಗ್ರೆಸ್ ಕೊಡಗು ಹನೀಫ್ ಎಸ್ . ಪಿ, ಕೊಡಗು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮೊಯಿದಿನ್ ಕುಂಜಿ, ನಾಪೋಕ್ಲು ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷರು ಕೆ. ಕೆ ರಾಜೇಶ್ವರಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಕರಿಕೆ ಗ್ರಾಂ .ಪಂ. ಉಪಾಧ್ಯಕ್ಷ ಬಾಲಚಂದ್ರ ನಾಯರ್, ಸಂಪಾಜೆ ಗ್ರಾಮ ಪಂಚಾಯತ ಅಧ್ಯಕ್ಷ ಜಿ.ಕೆ ಹಮೀದ್ , ಸದಸ್ಯ ಹನೀಫ್ ಎಸ್ .ಕೆ , ವಿಜಯ ಕನ್ಯಾನ,ಸೋಮಶೇಖರ್ ಕೊಯಿಂಗಾಜೆ, ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.