ನ್ಯೂಸ್ ನಾಟೌಟ್ :ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯಲ್ಲಿ ಈ ಘಟನೆ ವರದಿಯಾಗಿದ್ದು, ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದ ಮಲ್ಲಿಕಾರ್ಜುನ್ ರುದ್ರಾಪುರ ಎಂಬುವವರು ಮೃ*ತರು ಎಂದು ತಿಳಿದು ಬಂದಿದೆ.
ಕಾನ್ಸ್ಟೇಬಲ್ ಮಲ್ಲಿಕಾರ್ಜುನ್ ಬೆಂಡಿಗೇರಿ ಪೊಲೀಸ್ ಠಾಣೆಯ ಹಿಂಬದಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳ ಹಿಂದಷ್ಟೇ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದ ಅವರು ಕೆಲಸದಲ್ಲಿಯೂ ಸಕ್ರಿಯರಾಗಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಲ್ಲಿಕಾರ್ಜುನ್ ಮೃ*ತದೇಹವನ್ನು ಕಿಮ್ಸ್ ಶ*ವಾಗಾರಕ್ಕೆ ರವಾನೆ ಮಾಡಲಾಗಿದೆ.