ನ್ಯೂಸ್ ನಾಟೌಟ್ : ಅನ್ನಭಾಗ್ಯ ಯೋಜನೆಗಾಗಿ ಬಜೆಟ್ನಲ್ಲಿ 10 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಇಂದು(ಜುಲೈ 10) ಸಂಜೆಯಿಂದಲೇ ಅನ್ನಭಾಗ್ಯ ಯೋಜನೆಗೆ ಚಾಲನೆ ಸಿಗಲಿದೆ. ಅಲ್ಲದೆ ಈ ತಿಂಗಳ ಹಣ ಇದೇ ತಿಂಗಳಲ್ಲಿ ಜನರ ಖಾತೆಗೆ ಜಮಾವಣೆ ಆಗಲಿದೆ ಎಂದು ಸರ್ಕಾರದ ತಿಳಿಸಿದೆ. ಆದರೆ ಆ ಹಣ ಹೇಗೆ ದೊರೆಯಲಿದೆ ಎಂಬ ಬಗ್ಗೆಯೂ ವಿವರಣೆ ನೀಡಲಾಗಿದೆ.
ಒಟ್ಟು 10 ಕೆ ಜಿ ಅಕ್ಕಿ ಕೊಡುವ ಯೋಜನೆಯಾಗಿದ್ದು, ಇದರಲ್ಲಿ 5 ಕೆ,ಜಿ ಅಕ್ಕಿ ಬದಲಿಗೆ ಪ್ರತಿ ಫಲಾನುಭವಿಗಳಿಗೆ 170 ರುಪಾಯಿ ಹಣ ಸಿಗಲಿದೆ. ಇದರಿಂದ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿದಾರರಿಗೆ ಪ್ರಯೋಜನ ಆಗಲಿದೆ.
1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಸೋಮವಾರ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಹಸಿವು ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಈ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದು, ಈ ಯೋಜನೆಯ ಪ್ರಕಾರ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಅಥವಾ ಆಹಾರ ಧಾನ್ಯ ಉಚಿತವಾಗಿ ಸಿಗಲಿದೆ.
ಯೋಜನೆಗೆ ಸಮರ್ಪಕವಾಗಿ ಅಕ್ಕಿ ಸಿಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಫಲಾನುಭವಿಗಳಿಗೆ 170 ರೂಪಾಯಿ ಹಣ ನೀಡಲಾಗುತ್ತದೆ. ಇದರಿಂದ 44.80 ಲಕ್ಷ ಅಂತ್ಯೋದಯ ಹಾಗೂ 3.97 ಕೋಟಿ ಆದ್ಯತಾ ಪಡಿತರ ಚೀಟಿದಾರರಿಗೆ ಪ್ರಯೋಜನ ಆಗಲಿದೆ. ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ. ಯೋಜನೆಗೆ ಜಾರಿಯ ಹಿನ್ನೆಲೆಯಲ್ಲಿ ಜುಲೈ ತಿಂಗಳ ಹಣ ಈ ತಿಂಗಳೊಳಗಾಗಿ ಜಮೆ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.