ನ್ಯೂಸ್ ನಾಟೌಟ್ : ಮೆಂಡಾ ಫೌಂಡೇಷನ್, ಎಸ್ & ಪಿ. ಗ್ಲೋಬಲ್ ಸೆಲ್ಕೋ ಫೌಂಡೇಶನ್ ಇದರ ಸಹಯೋಗದಲ್ಲಿ ಬೆಳ್ಳಾರೆ ಕೆ.ಪಿ.ಎಸ್. ಬೆಳ್ಳಾರೆ ಕಾಲೇಜಿನಲ್ಲಿ ನೂತನ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೋಮವಾರ (ಜು.24 ರಂದು) ನೆರವೇರಿಸಿದರು.
ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತಾಡಿದ ಶಾಸಕಿ ಭಾಗೀರಥಿ ಮರುಳ್ಯ, ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸನ್ನು ಹೆಚ್ಚು ಉಪಯೋಗಿಸಿಕೊಂಡು ಉತ್ತಮ ಶಿಕ್ಷಣ ಪಡೆಯಲಿ ಎಂದು ಹಾರೈಸಿದರು.
ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸುಳ್ಯ ತಹಶೀಲ್ದಾರ್ ಮಂಜುನಾಥ್ ಎಂ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ಬಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕೆ.ಪಿ.ಎಸ್ ಪ್ರಭಾರ ಪ್ರಾಂಶುಪಾಲ ವಿಶ್ವನಾಥ್ ಗೌಡ, ಕೆ.ಪಿ.ಎಸ್ ಉಪಪ್ರಾಂಶುಪಾಲೆ ಉಮಾಕುಮಾರಿ, ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಸಂಜೀವ ಕುದ್ಪಾಜೆ, ತಾಲೂಕು ಆರೋಗ್ಯಾಧಿಕಾರಿ ನಂದಕುಮಾರ್ ಬಿ. ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.