ನ್ಯೂಸ್ ನಾಟೌಟ್: ಮಂಡೆಕೋಲು ನೂತನ ಸಂಜೀವಿನಿ ಮಾರುಕಟ್ಟೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಆಹಾರ ಧಾನ್ಯ ಖರೀದಿಸುವ ಮೂಲಕ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ , ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಉಪಾಧ್ಯಕ್ಷ ಅನಿಲ್ ತೋಟಪಾಡಿ, ಮಂಡೆಕೋಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಕೆ. ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ಹಾಗೂ ಸಂಜೀವಿನಿ ಒಕ್ಕೂಟ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.