ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಿಂದ ಬಜರಂಗದಳದ ಮೂವರು ಕಾರ್ಯಕರ್ತರನ್ನು ಗಡಿಪಾರು ಮಾಡುವ ಚಿಂತನೆಯ ಬಗೆಗಿನ ನೋಟಿಸ್ ಒಂದು ಜಾರಿಗೊಳಿಸಲಾಗಿದೆ. ಅಂಶು ಕುಮಾರ್ (ಐಪಿಎಸ್) ವಿಶೇಷ ಕಾರ್ಯಾನಿರ್ವಾಹಕ ದಂಡಾಧಿಕಾರಿ ಮತ್ತು ಉಪ ಪೊಲೀಸ್ ಆಯುಕ್ತ ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಇವರು ಹೊರಡಿಸಿದ ಆದೇಶದಲ್ಲಿ ಇಂತಹದ್ದೊಂದು ಪ್ರಸ್ತಾವನೆಯನ್ನು ಮಾಡಿದ್ದಾರೆ. ಇಂದು ಡಿಸಿಪಿ ಎದುರು ಮೂವರು ಬಜರಂಗದಳ ಕಾರ್ಯಕರ್ತರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಜರಂಗದಳ ಕಾರ್ಯಕರ್ತರನ್ನು ಒಂದು ವರ್ಷದ ಮಟ್ಟಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು.
ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆದಿತ್ತು ಎಂದು ಹೇಳಲಾಗಿದೆ. ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ ಗಳಿಂದ ಗಡಿಪಾರಿಗೆ ವರದಿ ನೀಡಲಾಗಿದೆ. ಇದೀಗ ನೋಟಿಸ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು, ಗಡಿಪಾರು ಮಾಡುವ ಸಾಧ್ಯತೆ ದಟ್ಟವಾಗಿದೆ.