ನ್ಯೂಸ್ ನಾಟೌಟ್ : ವಿಮಾನದಲ್ಲಿ ಚಿನ್ನ ಹಾಗೂ ಡ್ರಗ್ಸ್ ಕಳ್ಳಸಾಗಾಣಿಕೆ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಲೇ ಇದೆ. ಕಸ್ಟಮ್ಸ್ ಅಧಿಕಾರಿಗಳಿಗೆ ಇದೊಂದು ಸವಾಲಾಗಿ ಪರಿಣಮಿಸಿದೆ.ಇದಕ್ಕಾಗಿ ಎಷ್ಟೇ ಕಠಿಣ ಕ್ರಮ ಜರುಗಿಸಿದರೂ ಸಹ ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಲೇ ಇದೆ.
ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಗಳಿಬ್ಬರು ಬೆಲ್ಟ್ನೊಳಗೆ 1ಕೋಟಿ 59 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಘಟನೆ ವರದಿಯಾಗಿದೆ.
ವ್ಯಕ್ತಿಗಳಿಬ್ಬರು ಅನಯಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸದ ಕಸ್ಟಮ್ಸ್ ಅಧಿಕಾರಿಗಳು ಕೂಡಲೇ ಅವರನ್ನು ತಪಾಸಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.ಸಿಂಗಾಪುರದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ವ್ಯಕ್ತಿಗಳು ಎನ್ನಲಾಗಿದ್ದು,ಕಸ್ಟಮ್ಸ್ ಅಧಿಕಾರಿಗಳು ಮೊದಲಿಗೆ ಗಮನಿಸಿದ್ದಾರೆ.
ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಬೆಲ್ಟ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರಿಂದ 1ಕೋಟಿ 59 ಲಕ್ಷ ರೂಪಾಯಿ ಮೌಲ್ಯದ 2 ಕೆಜಿ 610 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.