ನ್ಯೂಸ್ ನಾಟೌಟ್ : ಇಡೀ ರಾಜ್ಯದಾದ್ಯಂತ ಸಂಚಲನ ಮೂಡಿಸುವಂತೆ ಮಾಡಿದ್ದ ವಾಶ್ ರೂಮ್ ನಲ್ಲಿ ಬಾಲಕಿಯರ ವಿಡಿಯೋ ಚಿತ್ರೀಕರಿಸಿದ ಘಟನೆ ವರದಿಯಾದ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ ನೀಡಿದ್ದಾರೆ.
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ ಅವರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚೀಂದ್ರ ಮತ್ತು ಆಯೋಗದ ಇತರ ಅಧಿಕಾರಿಗಳೊಂದಿಗೆ ಘಟನೆಯ ಕುರಿತಾಗಿ ಮಾಹಿತಿ ಪಡೆದುಕೊಂಡರು. ಬಳಿಕ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಅಪರಾಧಿ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕೂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಧವಾರ ಸಂಜೆ ನಗರಕ್ಕೆ ಆಗಮಿಸಿದ್ದ ಖುಷ್ಬೂ ಮಾಧ್ಯಮಗಳೊಂದಿಗೆ ಮಾತನಾಡಿ, ನಾವು ಯಾವುದೇ ಕೋಮಿನ ಮಹಿಳೆಯ ರಕ್ಷಣೆಗೆ ಬಂದಿಲ್ಲ. ಸತ್ಯಾಂಶ ಏನು ಅನ್ನುವುದನ್ನು ಮನಗಂಡು ತನಿಖೆ ಮಾಡಿ. ಪ್ರಕರಣಕ್ಕೆ ಯಾವುದೇ ರೀತಿಯ ಕೋಮು ಬಣ್ಣ ಬಳಿಯದೇ ಪಾರದರ್ಶಕತೆ ಕಾಪಾಡಿ ಎಂದು ಹೇಳಿದ್ದರು.ಈ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಅನೇಕ ಸಂಗತಿಗಳ ತನಿಖೆ ಆಗಬೇಕಿದೆ. ಪೂರಕವಾದ ಸಾಕ್ಷಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಿದೆ ಎಂದರು.
ಘಟನೆಗೆ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಅನೇಕ ಫೇಕ್ ವಿಡಿಯೋಗಳು ಹರಿದಾಡುತ್ತಿದ್ದು,ಅವು ಯಾವುದೂ ಸತ್ಯವಲ್ಲ ಎಂದ ಅವರು, ಪೊಲೀಸರು ಈಗಾಗಲೇ ಮೂರು ಮೊಬೈಲ್ಗಳ ಡಾಟಾ ಸಂಗ್ರಹಿಸಿದ್ದಾರೆ.ವಿಧಿ ವಿಜ್ಞಾನ ಪ್ರಯೋಗಾಲಯಕ್ಕು ಕೂಡ ಮೊಬೈಲ್ಗಳನ್ನು ಕಳುಹಿಸಬೇಕಾಗಿದೆ. ಅಲ್ಲಿ ಸಾಕ್ಷ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಮೂವರನ್ನು ಕೂಡ ಅಮಾನತು ಮಾಡಲಾಗಿದೆ.ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದು, ಈ ಬಗ್ಗೆ ಯಾರೂ ಸಂದೇಹಕ್ಕೊಳಗಾಗುವುದು ಬೇಡ.ತನಿಖೆ ಪೂರ್ಣಗೊಳ್ಳುವ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮಹಿಳಾ ಆಯೋಗ ಎನ್ನುವಂಥದ್ದು ಪ್ರತಿಭಟನೆ ಮಾಡಲು ಇರುವ ಸಂಸ್ಥೆಯಲ್ಲ.ಮಹಿಳೆಯರಿಗೆ ಎಲ್ಲಿ ಅನ್ಯಾಯವಾಗುತ್ತದೋ , ಎಲ್ಲಿ ರಕ್ಷಣೆ ಇರಲ್ವೋ ಅದಕ್ಕಾಗಿ ಧಾವಿಸಿ ಬರುವ ಸಂಸ್ಥೆ ಇದು.ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ರಾಜಕೀಯ ಒತ್ತಡವಿಲ್ಲದೆ ತನಿಖೆ ನಡೆಸುತ್ತೇವೆ ಎಂದು ಹೇಳಿದರು.