ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಾದ್ಯಂತ ಮಳೆಯಬ್ಬರ(rain) ಮುಂದುವರಿದಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ ೦7ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು , ಮಳೆ ಮುಂದುವರಿಯುವ ಸೂಚನೆಯಿದೆ. ಹೀಗಾಗಿ ನಾಳೆ(ಜುಲೈ ೦7) ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.