ನ್ಯೂಸ್ ನಾಟೌಟ್: ಕಾಡು ಹಂದಿಗಳನ್ನು ಬೇಟೆಯಾಡುವ ಸಲುವಾಗಿ ಹಾಕಲಾಗಿದ್ದ ಲೈವ್ ವೈರ್ಗಳ ಸ್ಪರ್ಶದಿಂದ ಹೆಣ್ಣು ಚಿರತೆ (Cheetah) ಮತ್ತು ಎರಡು ಚಿರತೆ ಮರಿಗಳು ಕೊನೆಯುಸಿರೆಳೆದಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೊಂಡಿಯಾ ಜಿಲ್ಲೆಯ ದೇವೋರಿ ಅರಣ್ಯ ವ್ಯಾಪ್ತಿಯಲ್ಲಿ ಗಾಳಿಗೆ ದುರ್ವಾಸನೆ ಬೀರುತ್ತಿರುವ ಬಗ್ಗೆ ವ್ಯಕ್ತಿಯೋರ್ವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ದೇವೋರಿ (Deori) ಅರಣ್ಯ ವ್ಯಾಪ್ತಿಯಲ್ಲಿ ಗಾಳಿಗೆ ದುರ್ವಾಸನೆ ಬೀರುತ್ತಿರುವ ಬಗ್ಗೆ ವ್ಯಕ್ತಿಯೋರ್ವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ದುರ್ವಾಸನೆ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಶೋಧ ನಡೆಸಿದಾಗ ಚಿರತೆ ಹಾಗೂ ಎರಡು ಮರಿಗಳ ಶ* ವ ಪತ್ತೆಯಾಗಿದೆ. ಸ್ಥಳದಲ್ಲಿ ಕಳ್ಳಬೇಟೆಗೆ ಬಳಸಿದ ವಿದ್ಯುತ್ ತಂತಿಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸುಳಿವಿನ ಮೇರೆಗೆ ಅರಣ್ಯಾಧಿಕಾರಿಗಳು ಭೋಯರ್ತೋಲಾ ಮತ್ತು ಮೆಹ್ತಖೇಡಾ ಗ್ರಾಮಗಳ ಎಂಟು ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಬಳಿಕ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿಎಫ್ ರಾಥೋಡ್ ಅವರ ಪ್ರಕಾರ, ನಾಲ್ವರು ಆಗಸ್ಟ್ 26ರ ರಾತ್ರಿ ಕಾಡು ಹಂದಿಗಳನ್ನು ಬೇಟೆಯಾಡಲು ಲೈವ್ ವೈರ್ಗಳನ್ನು ಹಾಕಿದ್ದರು. ಅದು ಚಿರತೆಗಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಹೆಣ್ಣು ಚಿರತೆ ಹಾಗೂ ಮರಿಗಳು ಎರಡು ದಿನಗಳ ಹಿಂದೆ ಜೀವನ ಅಂತ್ಯ ಕಂಡಿದ್ದು, ದೇಹದ ಭಾಗಗಳು ಹಾಗೆಯೇ ಇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಮತ್ತು ಇತರೆ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ದೇಹವನ್ನು ಸುಡಲಾಯಿತು.