ನ್ಯೂಸ್ ನಾಟೌಟ್ : ಇಂದು ದೇಶದೆಲ್ಲೆಡೆ 76ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ-ಸಡಗರ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ಇಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ಈ ವೇಳೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡರು 76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ನಮ್ಮ ದೇಶಕ್ಕಾಗಿ ಪ್ರಾಣವನ್ನು ಲೆಕ್ಕಿಸದೇ ಹೋರಾಡಿದ ವೀರ ಯೋಧರಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ.ದೇಶ ಭಕ್ತರ ತ್ಯಾಗ ಬಲಿದಾನದ ಪ್ರತೀಕವೇ ಇದು.ಅವರನ್ನು ನಾವು ಸದಾ ಸ್ಮರಿಸುತ್ತಿರಬೇಕು.ಇಂದು ಗಡಿಯಲ್ಲಿ ಕಾಯುವ ಯೋಧರಿಂದ ನಾವಿಲ್ಲಿ ಕ್ಷೇಮವಾಗಿದ್ದೇವೆ. ಭಾರತ ಮುಂದುವರಿಯುತ್ತಿರುವ ದೇಶ ಶಿಕ್ಷಣ,ತಾಂತ್ರಿಕ, ಆರೋಗ್ಯ ಹೀಗೆ ನಮ್ಮ ದೇಶ ಮುಂದುವರಿದ ರಾಷ್ಟ್ರಗಳ ಸಾಲಿನತ್ತ ಹೆಜ್ಜೆ ಇಡುತ್ತಿರುವುದು ಹೆಮ್ಮೆಪಡಬೇಕಾದ ವಿಚಾರ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಸುಳ್ಯದ ಪ್ರಧಾನ ಕಾರ್ಯದರ್ಶಿ ಹಾಗೂ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ., ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ. ಬಾಲಚಂದ್ರ ಗೌಡ ಮತ್ತು ಡಾ. ಪೂವಪ್ಪ ಕಣಿಯೂರು, ಪ್ರಾಂಶುಪಾಲ ಪ್ರೊ.ರುದ್ರಕುಮಾರ್ ಎಮ್.ಎಮ್., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ.ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ.ಮಮತಾ ಕೆ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.