ನ್ಯೂಸ್ ನಾಟೌಟ್: ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ದಿ.ಸೌಜನ್ಯ ತಾಯಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಟ್ಸಾಪ್ ಗ್ರೂಪ್ ಒಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ ಹಾಕಿದ ಸುರೇಶ್ ರಾಜ್ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 505(1)(ಬಿ),509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯ ನೇರಪ್ರಸಾರ ಕಾರ್ಯಕ್ರಮದ ತುಣುಕುಗಳು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಸಭೆಯಲ್ಲಿ ಸೌಜನ್ಯ ತಾಯಿ ಮಗಳನ್ನು ಕಳೆದುಕೊಂದ ನೋವಿನಿಂದ ಕಣ್ಣೀರಿಟ್ಟು ನ್ಯಾಯಕೊಡಿ ಎಂದು ಅಂಗಲಾಚುತ್ತಿದ್ದರು. ಇದಕ್ಕೆ ಹಲವಾರು ರೀತಿಯಲ್ಲಿ ಬರುತ್ತಿದ್ದವು. ಆದರೆ ರಾಘವೇಂದ್ರ ಭಟ್ ಎಂಬಾತ ಸೌಜನ್ಯ ತಾಯಿ ಕುಸುಮಾವತಿ ಅವರ ಬಗ್ಗೆ ಕೆಟ್ಟ ಪದ ಬಳಸಿ ಪ್ರತಿಕ್ರಿಯಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಕೆಟ್ಟ ಪದ ಬಳಸಿದವನಿಗೆ ಸಾರ್ವಜನಿಕರು ಫೋನ್ ಮಾಡಿ ಹಿಗ್ಗಾಮುಗ್ಗ ಜಾಡಿಸಿದ್ದರು. ಇದೀಗ ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ.85/2023 ಕಲಂ509 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.