ನ್ಯೂಸ್ ನಾಟೌಟ್: ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಅನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಜಪೆ ಪೊಲೀಸರು ಬೇಧಿಸಿ 230.4 ಗ್ರಾಂ ತೂಕದ ಚರಸ್, ಕಾರನ್ನು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಸೂರಿಂಜೆ ಗ್ರಾಮದ ಕಿನ್ನಿಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಅಜೀಜ್(34) ಎಂದು ಗುರುತಿಸಲಾಗಿದೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಮಂಗಳವಾರ (ಆ.1ರಂದು) ಮಧ್ಯಾಹ್ನ ಗಸ್ತಿನಲ್ಲಿದ್ದ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆಗ ನಂಬರ್ ಪ್ಲೇಟ್ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರನ್ನು ಪೊಲೀಸರು ನಿಲ್ಲಿಸುವಂತೆ ಸೂಚಸಿದಾಗ ಅದರ ಚಾಲಕ ಕಾರು ನಿಲ್ಲಿಸದೆ ವೇಗವಾಗಿ ಚಲಾಯಿಸಿದ್ದಾನೆ. ಬಳಿಕ ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್ನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಪತ್ತೆಯಾಗಿದೆ. ತಕ್ಷಣ ಪೊಲೀಸರು ಕಾರು ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ಇನ್ನಿತರ ಆರೋಪಿಗಳಿಗಾಗಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್ (ಕಾ&ಸು) ದಿನೇಶ್ ಕುಮಾರ್ DCP (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ನಿರ್ದೇಶನದಂತೆ, ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.