ನ್ಯೂಸ್ ನಾಟೌಟ್ : ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳೊಂದಾದ ಹಾಗೂ ದೇಶದ ಇತಿಹಾಸದಲ್ಲೇ ಅತಿದೊಡ್ಡ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗೃಹ ಲಕ್ಷ್ಮಿ ಯೋಜನೆಗೆ (Gruha lakshmi Scheme) ಚಾಲನೆ ಕ್ಷಣಗಣನೆ ಆರಂಭಗೊಂಡಿದೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಹೇಳಿಕೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ. ನೇರವಾಗಿ ಖಾತೆಗೆ ಜಮಾ ಮಾಡುವ ವಿಶೇಷ ಕಾರ್ಯಕ್ರಮ ಇದಾಗಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತುಂಬ ಭಾವುಕರಾಗಿದ್ದು, ಹಲವು ವಿಷಯಗಳನ್ನೊಳಗೊಂಡಂತೆ (Siddaramaiah becomes emotional) ಟ್ವೀಟ್ ಮಾಡಿದ್ದಾರೆ. ತಾಯಂದಿರ ಮುಖದಲ್ಲಿ ನೆಮ್ಮದಿಯ ನಗೆ ಕಾಣೋದಕ್ಕೆ ನಾನು ಉತ್ಸುಕನಾಗಿದ್ದೇನೆ ಎಂದಿದ್ದಾರೆ.
*ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ.
* ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ.
* ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.
*ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ.
*ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ. ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದೊಂದು ಮಹತ್ವದ ಯೋಜನೆಗಳಲ್ಲಿ ಒಂದು.ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಇದು ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ತನ್ನ ತವರಲ್ಲೇ ನಡೆಯಬೇಕು ಎಂದು ಹಠಕ್ಕೆ ಬಿದ್ದ ಸಿಎಂ ಅವರು ಬೆಳಗಾವಿಯಲ್ಲಿ ನಿಗದಿಯಾದ ಕಾರ್ಯಕ್ರಮವನ್ನು ಕೂಡಾ ಕ್ಯಾನ್ಸಲ್ ಮಾಡಿಸಿ ಮೈಸೂರಿಗೆ ಸ್ಥಳಾಂತರ ಮಾಡಿಸಿಕೊಂಡಿದ್ದರು.ಇದೀಗ ಕಳೆದ ಮೂರು ದಿನಗಳಿಂದ ಮೈಸೂರಿನಲ್ಲೇ ಬೀಡುಬಿಟ್ಟು ಇದಕ್ಕಾಗಿ ಸಿದ್ಧತೆ ನಡೆಸಿ , ಮಾರ್ಗದರ್ಶನ ನೀಡಿ ಪ್ರತಿಯೊಂದನ್ನು ಪರಿಶೀಲಿಸುತ್ತಿದ್ದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಶೇಷ ಕಾಳಜಿ ವಹಿಸುವ ಮುಖೇನ ಈ ಕಾರ್ಯಕ್ರಮಕ್ಕೆ ಅರ್ಥ ಬರುವಂತೆ ಮಾಡಿದ್ದಾರೆ.
ಶಕ್ತಿ ಯೋಜನೆ ಉದ್ಘಾಟನೆಯಾದಗಲೂ ಮಹಿಳೆಯರು ಫುಲ್ ಖುಷಿಯಾಗಿದ್ದರು.ಕಲಬುರಗಿಯಲ್ಲಿ ಹಿರಿಯ ಮಹಿಳೆಯೊಬ್ಬರು ಬಸ್ ಹತ್ತುವ ಮುನ್ನ ಅದರ ಮೆಟ್ಟಿಲುಗಳಿಗೆ ನಮಸ್ಕರಿಸಿ ಮೇಲೇರಿದ್ದರು.ಈ ದೃಶ್ಯವನ್ನು ಕಂಡಾಗಲೂ ಸಿದ್ದರಾಮಯ್ಯ ಅವರಿಗೆ ಕಣ್ತುಂಬಿ ಬಂದಿತ್ತು.ವಿರೋಧಿಗಳು ಸಾವಿರ ಹೇಳಲಿ, ನೂರಾರು ಟೀಕೆ ಮಾಡಲಿ. ಆದರೆ ಇದೊಂದೇ ದೃಶ್ಯ ಸಾಕು ನಾವು ಮಾಡಿದ ತೀರ್ಮಾನ ಸರಿ ಎನ್ನುವುದಕ್ಕೆ ಎಂದು ಭಾವುಕರಾಗಿ ನುಡಿದಿದ್ದರು. ಇಂಥ ದೃಶ್ಯಗಳಿಂದ ನನಗೆ ಕೆಲಸ ಮಾಡಲು ನೂರು ಪಟ್ಟು ಶಕ್ತಿ ಬರುತ್ತದೆ ಎಂದು ಹೇಳಿರುವ ಮಾತು ವೈರಲ್ ಆಗಿತ್ತು.