ನ್ಯೂಸ್ ನಾಟೌಟ್: ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಸಿಎಂ ಸೂಚನೆಯ ಮೇರೆಗೆ ಅಧಿಕಾರಿಗಳು ಕೂಡಲೇ ಬುಲೆಟ್ ಪ್ರೂಫ್ ಗ್ಲಾಸ್ ತೆಗೆದರು.
ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಅದನ್ನು ಗಮನಿಸಿದ ಮುಖ್ಯಮಂತ್ರಿಗಳು, ಬುಲೆಟ್ ಪ್ರೂಫ್ ಗ್ಲಾಸ್ ತೆರವು ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕೂಡಲೇ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಯಲಾಯಿತು. ಈ ಮೂಲಕ ಜನತೆಗೆ ಮಹತ್ವದ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿದೆ, ನಾವು ಎಲ್ಲರಂತೆ ಸಾಮಾನ್ಯರು ಮತ್ತು ನಮ್ಮ ರಾಜ್ಯದಲ್ಲಿ ನಮಗೆ ರಕ್ಷಣೆ ಇದೆ, ಎಲ್ಲರೂ ನಮ್ಮ ಆಡಳಿತದಲ್ಲಿ ಸುರಕ್ಷಿತರು ಎಂಬ ಸಂದೇಶ ಸಾರಿದ್ದಾರೆ ಎಂದು ಹಲವರು ಬಣ್ಣಿಸಿದ್ದಾರೆ.
ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ.
ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದರು. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸಲಾಗುತ್ತಿದೆ ಎಂದರು.