ನ್ಯೂಸ್ ನಾಟೌಟ್ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ (ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್) ಯೋಜನೆಯು ಜುಲೈ ತಿಂಗಳಿಂದಲೇ ಅನ್ವಯವಾಗಿದ್ದು, ಆಗಸ್ಟ್ನಲ್ಲಿ ಬಂದ ಕರೆಂಟ್ ಬಿಲ್ ಶೂನ್ಯ ಬಿಲ್ ಎಂದು ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಗೃಹಜ್ಯೋತಿ ಯೋಜನೆಯ ಮೊದಲ ಕರೆಂಟ್ ಬಿಲ್ ಬಂದಿದ್ದು, ಶೂನ್ಯ ಬಿಲ್ ಕೊಡಲಾಗಿದೆ. ತುಮಕೂರು ಜಿಲ್ಲೆಯ ಜನರಿಗೆ ಜೀರೋ ಬಿಲ್ ನೀಡಲಾಗಿದೆ. ಶೂನ್ಯ ಕರೆಂಟ್ ಬಿಲ್ ಪಡೆದ ಗ್ರಾಹಕರು ಸಂತೋಷಗೊಂಡಿದ್ದಾರೆ.
ರಾಜ್ಯದಲ್ಲಿ ಈವರೆಗೆ 1.42 ಕೋಟಿ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. 200ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರು. ಅರ್ಹತೆ ಮಿತಿಯಲ್ಲಿರುವ ಎಲ್ಲಾ ಫಲಾನುಭವಿಗಳಿಗೆ ಉಚಿತ ವಿದ್ಯುತ್ ಸಿಗಲಿದೆ. ಜುಲೈ 27 ರೊಳಗೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ಆಗಸ್ಟ್ ತಿಂಗಳಲ್ಲಿ ಶೂನ್ಯ ಬಿಲ್ ಪಡೆಯುತ್ತಾರೆ. ನಂತರ ಸಲ್ಲಿಸಿದವರು ಮುಂಬರುವ ತಿಂಗಳಲ್ಲಿ ಯೋಜನೆ ಲಾಭ ಪಡೆಯಲಿದ್ದಾರೆ.
ಗೃಹಜ್ಯೋತಿ ಯೋಜನೆಗೆ ಡೆಡ್ ಲೈನ್ ಇಲ್ಲ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಮತ್ತು ಅಮೃತ ಜ್ಯೋತಿ ಯೋಜನೆಯನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಲಾಗಿದೆ. ಭಾಗ್ಯ ಜ್ಯೋತಿ ಮತ್ತು ಕುಟೀರ ಜ್ಯೋತಿ ಕುಟುಂಬದವರಿಗೆ 40ಯೂನಿಟ್ ಯಿಂದ 53 ಯೂನಿಟ್ ಹಾಗೂ ಶೇ 10ರಷ್ಟು ಹೆಚ್ಚುವರಿ ಉಚಿತ ನೀಡಲಾಗುತ್ತದೆ. ಅಮೃತ ಜ್ಯೋತಿ ಗೆ 75 ಯೂನಿಟ್ ಶೇ 10 ರಷ್ಟು ಹೆಚ್ಚಳ ಮಾಡಲಾಗುತ್ತದೆ ಎಂದರು.
ಗೃಹಜ್ಯೋತಿ ಯೋಜನೆಯ ಕುರಿತು ಮಾತನಾಡಿದ ಇಂಧನ ಸಚಿವ ಕೆ.ಜೆ, ಜಾರ್ಜ್ ಅವರು, ಇಂದು ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ಬರುತ್ತಿದೆ. ನಾವು ಚುನಾವಣೆಗೆ ಹೋಗುವ ಮೊದಲೆ ಗ್ಯಾರಂಟಿ ಕಾರ್ಡ್ ನಲ್ಲಿ ಈ ಯೋಜನೆ ಘೋಷಣೆ ಮಾಡಿದ್ದೆವು. ಅದರಂತೆ ಆ ಗ್ಯಾರಂಟಿ ಕಾರ್ಡ್ ಗೆ ನಮ್ಮ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿದ್ದರಾಮಯ್ಯ ಅವರು ಸಹಿ ಮಾಡಿದ್ದರು. ಅದರಂತೆ ನಾವು ಯೋಜನೆ ಜಾರಿಗೆ ತಂದಿದ್ದೇವೆ. ಕುಟೀರಾ ಜ್ಯೋತಿ, ಅಮೃತ್ ಜ್ಯೋತಿ, ಭಾಗ್ಯ ಜ್ಯೋತಿ ಯೋಜನೆಗಳನ್ನು ಈ ಯೋಜನೆಯೊಳಗೆ ತರಲಾಯಿತು ಎಂದು ಮಾಹಿತಿ ನೀಡಿದ್ದಾರೆ.