ನ್ಯೂಸ್ ನಾಟೌಟ್: ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ (India Post GDS recruitment 2023) 30,041 ಗ್ರಾಮೀಣ ಅಂಚೆ ಸೇವಕ (Gramin Dak Sevaks – GDS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಗ್ರಾಮೀಣ ಅಂಚೆ ಸೇವಕರ ಹುದ್ದೆಗಳು ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳನ್ನು ಒಳಗೊಂಡಿರುತ್ತವೆ. ಆಗಸ್ಟ್ 3 ರಿಂದಲೇ ಅರ್ಜಿ ಪ್ರಕ್ರಿಯೆ ಶುರುವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣ indiapostgdsonline.gov.in ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.
ಭಾರತೀಯ ಅಂಚೆ ಇಲಾಖೆಯು ಒಟ್ಟು 30041 ಗ್ರಾಮೀಣ ಅಂಚೆ ಸೇವಕ ಹುದ್ದೆಗಳನ್ನು (GDS) ಭರ್ತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು 18ರಿಂದ 40 ವರ್ಷದೊಳಗಿರಬೇಕು.
ವಿದ್ಯಾರ್ಹತೆ ಏನು..?
ಗಣಿತ ಮತ್ತು ಇಂಗ್ಲಿಷ್ ವಿಷಯಗಳನ್ನು ಒಳಗೊಂಡಿರುವ ಮಾಧ್ಯಮಿಕ ಶಾಲಾ ಪರೀಕ್ಷೆಯನ್ನು ಪೂರೈಸಿರಬೇಕು. ಅಂದರೆ, 10ನೇ ತರಗತಿ ಪಾಸಾದ ಸರ್ಟಿಫಿಕೇಟ್ ಇರಬೇಕು. ಗಣಿತ ಮತ್ತು ಇಂಗ್ಲಿಷ್ ವಿಷಯಗಳನ್ನು ಅಥವಾ ಅದಕ್ಕೆ ಸಮನಾದ ವಿಷಯಗಳ ಪರೀಕ್ಷೆ ಬರೆದಿರಬೇಕು. ಅಭ್ಯರ್ಥಿಗಳು ಸ್ಥಳೀಯ ಭಾಷೆಯನ್ನು ಕಡ್ಡಾಯ ಅಥವಾ ಐಚ್ಛಿಕ ವಿಷಯವಾಗಿ ಕನಿಷ್ಠ ದ್ವಿತೀಯ ದರ್ಜೆಯವರೆಗೆ ಅಧ್ಯಯನ ಮಾಡಿರಬೇಕು.
ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಬೇಕಾಗುತ್ತದೆ. ಆದರೆ, ಎಲ್ಲ ಮಹಿಳಾ ಹಾಗೂ ಮಂಗಳಮುಖಿಗಳು ಮತ್ತು ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 12000 ರೂ.ನಿಂದ 29,380 ರೂ. ಮತ್ತು ಅಸ್ಟಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್/ಅಂಚೆ ಸೇವಕ ಹುದ್ದಗಳಿಗೆ 10,000 ರೂ.ನಿಂದ 24,470 ರೂ. ನಿಗದಿಪಡಿಸಲಾಗಿದೆ.