ನ್ಯೂಸ್ ನಾಟೌಟ್: ಬಹುಭಾಷಾ ನಟಿ ಮತ್ತು ಕನ್ನಡದಲ್ಲಿ ಡಾ.ರಾಜ್ ಕುಮಾರ್ ನಂತಹ ಮೇರು ನಟರೊಂದಿಗೆ ನಟಿಸಿ ಸಯ ಎನಿಸಿಕೊಂಡಿದ್ದ ಹಿರಿಯ ನಟಿ ಜಯಪ್ರದಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಎಗ್ಮೋರ್ ನ್ಯಾಯಾಲಯ ನಟಿ ಜಯಪ್ರದಾಗೆ ಆರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ ಎನ್ನಲಾಗಿದೆ.
ಜಯಪ್ರದಾ ದಕ್ಷಿಣ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿ ನಟಿಸಿರೋ ಜನಪ್ರಿಯ ನಟಿ. ಅಲ್ಲದೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು. ನ್ಯಾಯಾಲಯದ ಪ್ರಕರಣದಲ್ಲಿ ಜಯಪ್ರದಾಗೆ ಸೋಲು ಎದುರಾಗಿದ್ದು, ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ನಟಿ ಜಯಪ್ರದಾ ವಿರುದ್ಧ ಸರ್ಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೆಷನ್ ನ್ಯಾಯಾಲಯದಲ್ಲಿ ದೂರನ್ನು ದಾಖಲಿಸಿತ್ತು. ಈ ಸಂಬಂಧ ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಅಲ್ಲದೆ 5 ಸಾವಿರ ದಂಡವನ್ನು ವಿಧಿಸಿದೆ. ನಟಿ ಜಯಪ್ರದಾ ಚೆನ್ನೈನಲ್ಲಿ ಎರಡು ಥಿಯೇಟರ್ಗಳನ್ನು ನಡೆಸುತ್ತಿದ್ದಾರೆ. ಈ ಎರಡೂ ಚಿತ್ರಮಂದಿರಗಳ ಮೇಲೆ ಈಗಾಗಲೇ ಕೇಸ್ ದಾಖಲಾಗಿದೆ. ಅಲ್ಲದೆ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದೆ.
ಇದೇ ವೇಳೆ ಚಿತ್ರಮಂದಿರದ ವ್ಯವಸ್ಥಾಪಕ ಮಂಡಳಿ ಥಿಯೇಟರ್ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಂದ ಇಎಸ್ಐ ಸಲುವಾಗಿ ಹಣವನ್ನು ಕಟ್ ಮಾಡಿಕೊಳ್ಳುತ್ತಿದೆ. ಆದರೆ, ಈ ಹಣವನ್ನು ರಾಜ್ಯ ಕಾರ್ಮಿಕ ವಿಮೆ ನಿಗಮಕ್ಕೆ ಸರಿಯಾಗಿ ಪಾವತಿ ಮಾಡುತ್ತಿಲ್ಲ. ಈ ಸಂಬಂಧ ಸರ್ಕಾರದ ರಾಜ್ಯ ಕಾರ್ಮಿಕರ ನಿಗಮ ಜಯಪ್ರದಾ ವಿರುದ್ಧ ದೂರನ್ನು ದಾಖಲಿಸಿತ್ತು. ಈ ಕೇಸ್ಗೆ ಸಂಬಂಧಿಸಿದಂತೆ ನಟಿ ಹಾಗೂ ಚಿತ್ರಮಂದಿರ ಮಾಲೀಕರಾಗಿರುವ ನಟಿ ಜಯಪ್ರದಾ ವಿರುದ್ಧ ಚೆನ್ನೈನ ಎಗ್ಮೋರ್ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಜಯಪ್ರದ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಹುಲಿಯ ಹಾಲಿನ ಮೇವು’, ‘ಕವಿರತ್ನ ಕಾಳಿದಾಸ’, ‘ಶಬ್ಧವೇದಿ’ ಹಾಗೂ ದರ್ಶನ್ ಅಭಿನಯದ ‘ ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದರು. ದಕ್ಷಿಣ ಭಾರತದ ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿ ಮಿಂಚಿದ್ದರು. ಸಿನಿಮಾದಿಂದ ರಾಜಕೀಯಕ್ಕೆ ಕಾಲಿಟ್ಟಿದ್ದ ನಟಿ ಅಲ್ಲೂ ಯಶಸ್ಸು ಕಂಡಿದ್ದರು. ಸಮಾಜವಾದಿ ಪಕ್ಷದಿಂದ ಹಿರಿಯ ನಟಿ ಎಂಪಿ ಕೂಡ ಆಗಿದ್ದರು.
ಜಯಪ್ರದಾ ಚೆನ್ನೈನ ಎಗ್ಮೋರ್ ನ್ಯಾಯಾಲಯಕ್ಕೆ ಕಾರ್ಮಿಕರಿಗೆ ನೀಡಬೇಕಾಗಿರುವ ಹಣವನ್ನು ಪಾವತಿ ಮಾಡುವುದಾಗಿ ತಿಳಿಸಿದ್ದರು. ಆದರೆ, ಇದಕ್ಕೆ ಸರ್ಕಾರಿ ಕಾರ್ಮಿಕಾ ನಿಗಮದ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಹಿರಿಯ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿದೆ.