ನ್ಯೂಸ್ ನಾಟೌಟ್: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಗುರುವಾರ ಮಧ್ಯಾಹ್ನ ಚೂರಿ ಇರಿತದಿಂದಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಭಗವಂತ್ ಖೂಬಾ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಬಿಜೆಪಿ ಮುಖಂಡರು ಭೇಟಿ ನೀಡಿ ಮೃತ ಯುವತಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು.
ಈ ಸಂದರ್ಭ ಮಾಜಿ ಶಾಸಕರಾದ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಜಿಲ್ಲಾ ಕಾರ್ಯದರ್ಶಿ ರಂದಿಪ್, ವಿಟ್ಲ ಪಟ್ಟಣ ಪಂಚಾಯತ್ನ ಅರುಣ್ ವಿಟ್ಲ ಸಹಿತ ಹಲವಾರು ಮಂದಿ ಜೊತೆಗಿದ್ದರು.