ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರಾವಳಿ ಜಿಲ್ಲೆಗಳ ಪ್ರಮುಖ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ.
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ. ಆದರೆ ಅವರಿಗೆ ಇಂಥ ಘಟನೆಗಳು ಅಷ್ಟೊಂದು ಪ್ರಮುಖವಾಗಿರುವುದಿಲ್ಲ. ಗೃಹ ಸಚಿವರು ಈ ಘಟನೆಯನ್ನು ಮಕ್ಕಳಾಟಿಕೆ ಎಂದಿದ್ದಾರೆ. ಕಾಂಗ್ರೆಸ್ನವರಿಗೆ ಉಡುಪಿ ವಿಡಿಯೋ ವಿವಾದ ಮಕ್ಕಳಾಟಿಕೆಯಂತೆ ಕಾಣುತ್ತಿದೆ.
ಮಕ್ಕಳಾಟಿಕೆ ಎನ್ನುವವರು ಸರಿಯಾದ ತನಿಖೆ ಮಾಡಲು ಹೇಗೆ ಸಾಧ್ಯ ಎಂದು ಶಾಸಕ ಭರತ್ ಶೆಟ್ಟಿ ಪ್ರಶ್ನಿಸಿದ್ದಾರೆ. ಒತ್ತಡ ಇದ್ದ ಹಿನ್ನೆಲೆಯಲ್ಲಿ ಒಂದು ವಾರ ಬಿಟ್ಟು ಎಫ್ ಐ ಆರ್ ಹಾಕಿದ್ದಾರೆ. ಇದೀಗ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಪ್ರಕರಣದ ಹಾದಿ ತಪ್ಪಿಸುವ ಸಾಧ್ಯತೆಯಿದೆ. ಅದಕ್ಕಾಗಿ ಬಿಜೆಪಿ ಎಸ್ಐಟಿ ತನಿಖೆಗೆ ಒತ್ತಾಯಿಸುತ್ತದೆ. ಈ ಬಗ್ಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬಿಜೆಪಿ ಎಂಎಲ್ಎ ಹಾಗೂ ಎಂಎಲ್ ಸಿಗಳು ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇವೆ ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ.