ನ್ಯೂಸ್ ನಾಟೌಟ್: ಮುಸ್ಲಿಂ (Muslim) ಯುವತಿಯೊಂದಿಗೆ ಆಟೋದಲ್ಲಿ ಹೊರಟಿದ್ದ ಹಿಂದೂ ಯುವಕನಿಗೆ ಚೆನ್ನಾಗಿ ಥಳಿಸಿರುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ (Belagavi) ನಡೆದಿದೆ.
ನೈತಿಕ ಪೊಲೀಸ್ ಗಿರಿ ವಿರೋಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಖಂಜರ್ ಗಲ್ಲಿಯಲ್ಲಿ ದುರ್ಘಟನೆ ಸಂಭವಿಸಿದೆ. ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದಕ್ಕೆ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಜ್ಞಾನೇಶ್ವರ ಚಪ್ಪಲಿ ವ್ಯಾಪಾರಿ ಆಗಿದ್ದಾನೆ. ತನ್ನೂರಿನ ಪರಿಚಯಸ್ಥ ಮುಸ್ಲಿಂ ಯುವತಿಯ ಜೊತೆಗೆ ಬೆಳಗಾವಿ ಬಸ್ ನಿಲ್ದಾಣದಿಂದ ಖಡೇಬಜಾರ್ ಕಡೆಗೆ ಆಟೋದಲ್ಲಿ ತೆರಳುತ್ತಿದ್ದ.
ಇದನ್ನು ಗಮನಿಸಿ ಆಟೋ ಹಿಂಬಾಲಿಸಿದ 10ಕ್ಕೂ ಅಧಿಕ ಯುವಕರು, ಅವರಿಬ್ಬರು ಖಡೇಬಜಾರ್ ಗೆ ಬರುತ್ತಿದ್ದಂತೆ ರಿಕ್ಷಾವನ್ನು ತಡೆದು ನಿಲ್ಲಿಸಿ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
ಬಳಿಕ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಗೂಂಡಾಗಿರಿ ಪ್ರದರ್ಶನ ಮಾಡಿರುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಯುವಕನ ಮೇಲೆ ಹಲ್ಲೆಗೈಯುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಂದ ಕೆಲವು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.