ನ್ಯೂಸ್ ನಾಟೌಟ್: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಯುವತಿಯ ಕತ್ತು ಸೀಳಿ ಪರಾರಿಯಾಗಿರುವ ಘಟನೆ ಇದೀಗ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ದುರ್ಘಟನೆ ಸಂಭವಿಸಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕತ್ತಿಗೆ ಇರಿದು ಅಪರಿಚಿತ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ಇರಿತಕ್ಕೊಳಗಾದ ಯುವತಿ ಗೌರಿ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಬೈಕ್ ನಲ್ಲಿ ಬಂದು ಯುವತಿಯ ತಡೆದು ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರಿಂದ ಪರಿಶೀಲನೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.