ನ್ಯೂಸ್ ನಾಟೌಟ್ : ಇಡೀ ದೇಶವೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಇಲ್ಲೊಂದೆಡೆ ಶಿಕ್ಷಕರೋರ್ವರು ಶಾಲೆಗೆ ಧ್ವಜಾರೋಹಣಕ್ಕೆಂದು ತೆರಳುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ್ ಕ್ರಾಸ್ ಬಳಿ ರಸ್ತೆ ಅಪಘಾತ (Road Accident) ಸಂಭವಿಸಿ ಶಿಕ್ಷಕ (Govt School Teacher) ದುರಂತ ಸಾವನ್ನಪ್ಪಿದ್ದಾರೆ. ಹೆಗಡೆ ಗ್ರಾಮದ ನಿವಾಸಿ ಗೋಪಾಲ ಪಟಗಾರ (50) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಸ್ವಾತಂತ್ರ್ಯ ದಿನಾಚರಣೆ (Independence Day 2023) ಪ್ರಯುಕ್ತ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವಿದ್ದು,ಹೀಗಾಗಿ ಭಾರಿ ಸಂಭ್ರಮದಿಂದ ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಶಿಕ್ಷಕನಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದಿದೆ. ಗೋಪಾಲ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು. ಬೈಕ್ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಎದುರಿಗೆ ಬಂದ ಬುಲೆರೋ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಈ ವೇಳೆ ಗಂಭೀರ ಗಾಯಗೊಂಡ ಶಿಕ್ಷಕ ಗೋಪಾಲ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.