ನ್ಯೂಸ್ ನಾಟೌಟ್: ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯಾದ್ಯಂತ ಕೂಗು ಜೋರಾಗುತ್ತಿದೆ. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಒತ್ತಾಯಿಸಿ ಕಡಬದಲ್ಲಿ ಬುಧವಾರ (ಆ.2ರಂದು) ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ತೊತ್ತಾಯ ಪ್ರತಿಭಟನೆ ಸಭೆ ನಡೆಯಿತು.
ಪ್ರಕರಣ ಹಿಂದಿರುವ ನೈಜ ಅಪರಾಧಿಗಳನ್ನು ಗುರುತಿಸಿ ಕಾನೂನಿನಡಿ ಶಿಕ್ಷಿಸುವಂತೆ ಆಗ್ರಹ ಎಲ್ಲೆಡೆಯಿಂದ ಕೇಳಿಬರುತ್ತಿದೆ. ಕಡಬ ಪೇಟೆಯಲ್ಲಿ ಸಾಗಿ ಬಂದ ಮೆರವಣಿಗೆ ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಬಳಿಕ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯ ಸ್ಟಿಕ್ಕರ್ ಅಳವಡಿಕೆ ಮಾಡಲಾಯಿತು. ಪ್ರತಿಭಟನಾ ಸಭೆಯಲ್ಲಿ ಹಲವಾರು ಸಂಘಟನೆಗಳು, ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.