ನ್ಯೂಸ್ ನಾಟೌಟ್ : ಇಂದು ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿರುವ ನಟ ಹಾಗೂ ಚಿನ್ನಾರಿಮುತ್ತ ಖ್ಯಾತಿಯ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ ಎಂದು ತಿಳಿದು ಬಂದಿದೆ. ಆ ಕುರಿತ ಲೇಟೆಸ್ಟ್ ಅಪ್ಡೇಟ್ಸ್ ಹೊರಬಿದ್ದಿದ್ದು, ಸ್ಪಂದನಾ ದೊಡ್ಡಪ್ಪ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು,ಸ್ಪಂದನಾ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವಿದೇಶಾಂಗ ಸಚಿವಾಲಯದ ಶಿಷ್ಟಾಚಾರ ಮುಗಿದ ನಂತರ ನಾಳೆ ಅಲ್ಲಿಂದ ಭಾರತಕ್ಕೆ ಶರೀರ ರವಾನೆ ಮಾಡಲಾಗುತ್ತದೆ ಎಂಬ ಮಾಹಿತಿಯಿದ್ದು, ನಾಳೆ ಅಥವಾ ನಾಡಿದ್ದು ಪಾರ್ಥಿವ ಶರೀರ ರಾಜ್ಯಕ್ಕೆ ತಲುಪಲಿದೆ ಎಂದು ಹೇಳಿದ್ದಾರೆ.
ಸ್ಪಂದನಾ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ.ನಾವ್ಯಾರೂ ಅಲ್ಲಿಗೆ ಹೋಗಲು ಆಗಿಲ್ಲ. ಮೂರರಿಂದ ನಾಲ್ಕು ಜನ ವಿಜಯರಾಘವೇಂದ್ರ ಜೊತೆ ಇದ್ದು, ಅವರು ರಾಜ್ಯಕ್ಕೆ ಬಂದ ನಂತರ ಎಲ್ಲಿ ಅಂತ್ಯಕ್ರಿಯೆ ಮಾಡಬೇಕು ಎಂಬ ಕುರಿತು ನಿರ್ಧಾರ ಮಾಡಲಿದ್ದೇವೆ ಎಂದು ತಿಳಿಸಿದರು.ಹೀಗಾಗಿ ಸದ್ಯಕ್ಕೆ ಈ ಬಗ್ಗೆ ಮಾಹಿತಿ ಇಲ್ಲ.ಆದರೆ ಅಂತ್ಯಕ್ರಿಯೆ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದ ಅವರು, ಬೆಂಗಳೂರು ಅಥವಾ ಬೆಳ್ತಂಗಡಿಯಲ್ಲಿ ಅಂತ್ಯಕ್ರಿಯೆ ಮಾಡುವ ಕುರಿತಂತೆ ವಿಜಯರಾಘವೇಂದ್ರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿದರು.