ನ್ಯೂಸ್ ನಾಟೌಟ್: ಕಾನೂನು ಕಲಿತು ಉತ್ತಮ ವಕೀಲರಾಗಿ ಸಮಾಜ, ಜನರೊಂದಿಗೆ ಬೆರೆಯಬೇಕು. ವಕೀಲರಿಗೆ ಸಮಯ ಪ್ರಜ್ಞೆ ಬಹಳ ಮುಖ್ಯ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದರು.
ಸುಳ್ಯ ಕೆವಿಜಿ ಕಾನೂನು ಕಾಲೇಜಿನ 33ನೇ ವಾರ್ಷಿಕೋತ್ಸವವನ್ನು ಕಾಲೇಜಿನ ಆಡಿಟೋರಿಯಂನಲ್ಲಿ ಉದ್ಘಾಟಿಸಿ ಮಾತನಾಡಿದರು.
ಕೆವಿಜಿ ಕಾನೂನು ಕಾಲೇಜು ಸ್ಥಾಪನೆಯಾಗಿ ಇಂದಿಗೆ 33 ವರ್ಷವಾಗಿದೆ. 33ನೇ ವರ್ಷದ ವಾರ್ಷಿಕೋತ್ಸವ ಆಚರಣೆ ಬಹಳ ಸಂತಸ ತಂದಿದೆ. ಇಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ನ್ಯಾಯಮೂರ್ತಿಗಳಾಗಿ, ಉತ್ತಮ ವಕೀಲರಾಗಿ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಬಹಳ ಹೆಮ್ಮಯ ವಿಚಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ ಕಾನೂನು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಅಲ್ಲದೇ ವಾರ್ಷಿಕ ಸಾಂಸ್ಕೃತಿಕ, ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಡಿ.ವಿ ಲೀಲಾಧರ್ ಭಾಗವಹಿಸಿದ್ದರು., ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಕಾರ್ಯದರ್ಶಿ ಹೇಮಾನಾಥ್ ಕುರುಂಜಿ, ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ಉದಯ್ ಕೃಷ್ಣಾ ಬಿ., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಟೀನಾ ಎಚ್.ಎಸ್., ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿಲನ್ ಬಿ.ಕೆ., ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವೆಂಕಟಕೃಷ್ಣ ಶರ್ಮಾ ಬಿ.ಕೆ.,ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಲತಾ ಕುಮಾರಿ ಕೆ.ಡಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆವಿಜಿ ಕಾನೂನು ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.