ನ್ಯೂಸ್ ನಾಟೌಟ್: ಸುಳ್ಯದ ಅಕ್ಷರ ಬ್ರಹ್ಮ ಕುರುಂಜಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆಯನ್ನು ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ದಿವಂಗತ ವೆಂಕಟರಮಣ ಗೌಡರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಅಧ್ಯಕ್ಷ ಡಾ| ಕೆ.ವಿ ಚಿದಾನಂದ, ತಂದೆಯವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಿಕೊಂಡು ಬಂದಿದ್ದೇವೆ. ಶಿಸ್ತು , ಸಂಯಮ, ಕಠಿಣ ಶ್ರಮ , ತ್ಯಾಗಗಳನ್ನು ನನ್ನ ಜೀವನದಲ್ಲಿ ವೈಯಕ್ತಿಕವಾಗಿ ನಾನು ಅಳವಡಿಸಿಕೊಂಡಿದ್ದೇನೆ, ನನಗೆ ಮಾತ್ರವಲ್ಲ ನೂರಾರು ಜನರಿಗೆ ಅವರು ಆದರ್ಶವಾಗಿದ್ದಾರೆ ಎಂದು ಸ್ಮರಿಸಿಕೊಂಡರು.
ಇದೇ ವೇಳೆ ಮಾತನಾಡಿದ ಮಾಜಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ದಿವಂಗತ ಕುರುಂಜಿ ವೆಂಕಟರಮಣ ಗೌಡರು ಇಲ್ಲದಿರುತ್ತಿದ್ದರೆ ಸುಳ್ಯದಲ್ಲಿ ಇಷ್ಟು ದೊಡ್ಡ ಶಿಕ್ಷಣ ಸಂಸ್ಥೆಗಳು ಸಾಧ್ಯವಾಗುತ್ತಿರಲಿಲ್ಲ. ಸಾವಿರಾರು ಜನರಿಗೆ ಶಿಕ್ಷಣವನ್ನು ಉಣಿಸಿರುವ ಕುರುಂಜಿಯವರ ಆದರ್ಶ ಎಲ್ಲರಿಗೂ ಸ್ಫೂರ್ತಿ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜ್ಞಾನೇಶ್, ಕುರುಂಜಿಯವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲ ಸಾಗುತ್ತಿದ್ದೇವೆ. ಅವರ ನೇರ ನಡೆ ನುಡಿಯ ವ್ಯಕ್ತಿತ್ವ ಹೆಚ್ಚು ಆಕರ್ಷಿಸುತ್ತಿತ್ತು. ಅವರ ನೆನಪು ಸದಾ ಮನದಲ್ಲಿರುತ್ತದೆ ಎಂದು ತಿಳಿಸಿದರು.
ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಡಿವಿ ಲೀಲಾಧರ್, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ನಿಲಾಂಬಿಕೈ ನಟರಾಜನ್, ಕೆವಿಜಿ ಮೆಡಿಕಲ್ ಕಾಲೇಜಿನ ಎಮಿರಿಟಸ್ ವಿಭಾಗದ ಪ್ರೊ ಶೀಲಾ ಜಿ ನಾಯಕ್, ಭಾರತೀಯ ರೆಡ್ ಕ್ರಾಸ್ ಸುಳ್ಯದ ಸಭಾಪತಿ ಸುಧಾಕರ್ ರೈ, ಗೌಡ ಒಕ್ಕಲಿಗ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತಿತರರು ಉಪಸ್ಥಿತರಿದ್ದರು.