ನ್ಯೂಸ್ ನಾಟೌಟ್ : ಹಿಂದೂ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕನಿಗೆ ಹಿಡಿದು ಥಳಿಸಿರುವ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಪೆಟ್ಟು ತಿಂದವ ಬಿಳಿಯಾರಿನ ಹುಡುಗ ಎಂದು ತಿಳಿದು ಬಂದಿದೆ.
ಹಿಂದೂ ಯುವತಿಯ ಯನ್ನು ಬಸ್ ಸ್ಟ್ಯಾಂಡ್ ಗೆ ಬಿಟ್ಟು ವಾಪಸ್ ಬರುವಾಗ ವಾಹನವನ್ನು ಅಡ್ಡಗಟ್ಟಿ ಸ್ಥಳೀಯರು ಅವರನ್ನು ಪ್ರಶ್ನಿಸಿದ್ದಾರೆ. ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಹಿಂದೂ ಹುಡುಗಿಯರು ಅನ್ಯಕೋಮಿನ ಯುವಕರ ಜೊತೆ ಸಿಕ್ಕಿಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಲವ್ ಜಿಹಾದ್ ವಿರುದ್ಧ ಸಮರ ಸಾರಿವೆ.