ನ್ಯೂಸ್ ನಾಟೌಟ್ : ರಬ್ಬರ್ ಟ್ಯಾಪಿಂಗ್ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ.ದಂಪತಿ ತಮಿಳುನಾಡು ಮೂಲದವರೆಂದು ತಿಳಿದು ಬಂದಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಹಲವು ವರುಷಗಳಿಂದಿದ್ದು, ಜೀವನೋಪಾಯಕ್ಕಾಗಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು.ಕಳೆದ ಕೆಲ ಸಮಯಗಳಿಂದ ಇವರು ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು.
ಆದರೆ ಕೆಲ ಸಮಯದಿಂದ ಅನಾರೋಗ್ಯದಿಂದ ಮನೆ ಯಜಮಾನ ರಾಜನ್ ಅವರು ಬಳಲುತ್ತಿದ್ದರು ಎನ್ನಲಾಗಿದೆ.ಇಂದು ಮನೆಯಲ್ಲಿ ದಂಪತಿ ಮಾತ್ರ ಇದ್ದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಎಲಿಮಲೆಯಲ್ಲಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದೆಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.