ನ್ಯೂಸ್ ನಾಟೌಟ್ : ರಾಜಧಾನಿ ದೆಹಲಿಯ (Delhi) ವಿಜೋರಾಂನಲ್ಲಿ ಭಾರಿ ದೊಡ್ಡ ದುರಂತವೊಂದು ಸಂಭವಿಸಿದೆ. ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಉಸಿರು ಚೆಲ್ಲಿದ ಘಟನೆ ನಡೆದಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಈ ಕೆಲಸದಲ್ಲಿ ಸುಮಾರು 35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು,ಐಜ್ವಾಲ್ನಿಂದ ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಲ್ಲಿ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಆದರೆ ಕೆಲಸ ಮಾಡುವ ವೇಳೆಇದ್ದಕ್ಕಿದ್ದ ಹಾಗೆ ಸೇತುವೆ ಕುಸಿದಿದೆ. ಉಳಿದ ಕಾರ್ಮಿಕರಿಗಾಗಿ ಶೋಧ ನಡೆಯುತ್ತಿದೆ.ಕಳೆದ ಕೆಲ ವರ್ಷಗಳ ಹಿಂದೆ ಕಾಮಗಾರಿ ಆರಂಭಗೊಂಡಿತ್ತು. ದುರಾದೃಷ್ಟವೆಂದರೆ ಇನ್ನೇನು ಕೆಲ ಸಮಯಗಳಲ್ಲಿ ಪೂರ್ಣಗೊಂಡು ಉದ್ಘಾಟನೆಗೂ ಸಿದ್ಧವಾಗುತ್ತಿತ್ತುಎಂಬ ಮಾಹಿತಿಯಿದೆ. ಅಷ್ಟರಲ್ಲಾಗಲೇ ಈ ದುರಂತ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತಪಟ್ಟವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಮಿಜೋರಾಂ ಮುಖ್ಯಮಂತ್ರಿ ಝೋರಂತರಂಗ ಟ್ವೀಟ್ ಮಾಡಿದ್ದು, “ಐಜ್ವಾಲ್ ಬಳಿಯ ಸಾಯಿರಂಗ್ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣೆ ಪ್ರಗತಿಯಲ್ಲಿದೆ ಎಂದಿದ್ದಾರೆ.
ಮಿಜೋರಾಂ ಮುಖ್ಯಮಂತ್ರಿ ಝೋರಂತರಂಗ ಟ್ವೀಟ್ ಮಾಡಿದ್ದು,ಈ ದುರಂತದಿಂದ ತೀವ್ರ ದುಃಖವಾಗಿದೆ. ನಾನು ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ .ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆ ಹೇಳುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.