ನ್ಯೂಸ್ ನಾಟೌಟ್ : ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿದ್ದಾರೆನ್ನುವ ಆರೋಪ ಹೊತ್ತು ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ (Chaitra Kundapur) ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ.ಈ ಮೂಲಕ ಇದಕ್ಕೆ ಸಂಬಂಧ ಪಟ್ಟಂತೆ ಬಗೆದಷ್ಟು ಸ್ಫೋಟಕ ವಿಚಾರಗಳು ಹೊರಬರುತ್ತಲೇ ಇದೆ..!
ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ (CCB) ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.ಈ ಮೂಲಕ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ.ಹಾಗಾದರೆ ಈ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಇನ್ನೂ ಕೆಲವರು ಭಾಗಿಯಾಗಿದ್ದಾರಾ ಅನ್ನುವ ಅನುಮಾನಗಳು ಮೂಡಲಾರಂಭಿಸಿದೆ.ಈ ಕುರಿತಂತೆ ಹಲವು ಆಯಾಮಗಳಲ್ಲಿ ಪೊಲೀಸ್ ತನಿಖೆ ಮುಂದುವರಿದಿದೆ.
ಈ ವಿಚಾರಕ್ಕೆ ಸಂಬಂಧಿಸಿ ಬಾಯಿ ಬಿಟ್ಟ ಚೈತ್ರಾ ಕುಂದಾಪುರ “ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ” ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ ಕುಂದಾಪುರ
ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.